ಬೆಂಗಳೂರು : ಬಿಲ್ಲವ ಸಮುದಾಯದ ಹೆಚ್ಚಿನ ಯುವಕರು ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹಲವು ಘಟನೆಗಳಲ್ಲಿ ಬಿಲ್ಲವ ಯುವಕರನ್ನು ಎತ್ತಿ ಕಟ್ಟಿ ಅವರ ಭವಿಷ್ಯದ ಜೊತೆ ಚೆಲ್ಲಾಟ ಆಡಲಾಗುತ್ತಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಕವಿತಾ ಸನಿಲ್ ಬೇಸರ ವ್ಯಕ್ತಪಡಿಸಿದ್ದಾರೆ.
ರವಿವಾರ ಇಲ್ಲಿನ ಬನ್ನೇರುಘಟ್ಟ ರಸ್ತೆಯಲ್ಲಿ ಬಿಲ್ಲವ ಅಸೋಸಿಯೇಷನ್ ‘ಬಿಲ್ಲವ ಭವನ’ದಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಅತ್ಯಂತ ದೊಡ್ಡ ಸಮಾಜವಾಗಿರುವ ಬಿಲ್ಲವ ಸಮಾಜ ಇಂದು ರಾಜಕೀಯ ಸೇರಿ ವಿವಿಧ ಕ್ಷೇತ್ರಗಳಲ್ಲಿ ಅವಕಾಶ ವಂಚಿತವಾಗಿದೆ ಎಂದು ಹೇಳಿದರು.
ಬಿಲ್ಲವ ಸಮಾಜದ ಯುವಕರು ಸರಿದಾರಿಗೆ ಬಂದು ಯಾವುದು ಸತ್ಯ, ಯಾವುದು ಸುಳ್ಳು, ಯಾವುದು ನ್ಯಾಯ, ಯಾವುದೇ ಅನ್ಯಾಯ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ಮಾಡಿದ ಅವರು, ಬಿಲ್ಲವ ಸಮಾಜ ಒಗ್ಗಟ್ಟಾದರೆ ನಮ್ಮನ್ನು ಎದುರಿಸುವ ಶಕ್ತಿ ಯಾರಿಗೂ ಇಲ್ಲ ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ ಬಿಲ್ಲವ ಸಮಾಜ ಸಂಘಟಿತವಾಗಿರುವುದನ್ನು ನೋಡಿದರೆ ಸಂತೋಷ ಆಗುತ್ತದೆ. ಆದರೆ, ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ಬಿಲ್ಲವ ಸಮಾಜ, ವಿವಿಧ ಕ್ಷೇತ್ರಗಳಲ್ಲಿನ ಅವಕಾಶದಿಂದ ವಂಚಿತವಾಗಿದೆ ಎಂದು ಅವರು ಹೇಳಿದರು.
0 comments: