Wednesday, May 8, 2019

ಗೆಜ್ಜೆಗಿರಿಯಲ್ಲಿ ಕೊಡಿಮರ ತೈಲಾಧಿವಾಸ ಸಂಪನ್ನ

ಗೆಜ್ಜೆಗಿರಿಯಲ್ಲಿ ಕೊಡಿಮರ ತೈಲಾಧಿವಾಸ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನ ಗೊಂಡಿದೆ.ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರಿ ಮಹಾಬಲ ಸ್ವಾಮೀಜಿ‌ ಮತ್ತು ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇಗುಲದ ಧರ್ಮದರ್ಶಿ ಶ್ರೀ ಕೃಷ್ಣ ಗುರೂಜಿ ಅವರ ಉಪಸ್ಥಿತಿಯಲ್ಲಿ, ಕ್ಷೇತ್ರದ ತಂತ್ರಿ ಗಳಾದ ಲೋಕೇಶ್ ಶಾಂತಿ ಅವರ ನೇತೃತ್ವದಲ್ಲಿ ಬುಧವಾರ ಕೊಡಿಮರಕ್ಕೆ ಎಳ್ಳೆಣ್ಣೆ ಸೇಚನ ನಡೆಯಿತು. ಕ್ಷೇತ್ರದ ಯಜಮಾನರಾದ ಶ್ರೀಧರ ಪೂಜಾರಿ ಅವರ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.ಕರಾವಳಿಯ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಆಗಮಿಸಿ ಎಳ್ಳೆಣ್ಣೆ ಸಮರ್ಪಿಸಿ ಕೃತಾರ್ಥರಾದರು. ಕ್ಷೇತ್ರಾಡಳಿತ ಸಮಿತಿಯ ಪದಾಧಿಕಾರಿಗಳು, ಕರಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ವಲಯ, ತಾಲೂಕುವಾರು ಗೆಜ್ಜೆಗಿರಿ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಾವಿರಾರು ಭಕ್ತರು ಬೆಳಗ್ಗಿನ ಉಪಾಹಾರ ಮತ್ತು ಮಧ್ಯಾಹ್ನದ ಭೋಜನ ಸವಿದರು.

0 comments: