Wednesday, May 22, 2019

ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತ್ಯಜಿತ್ ಸುರತ್ಕಲ್ ಆಯ್ಕೆಯಾಗುವರೇ?

ಕಳೆದ ವಿಧಾನಸಭಾ ಚುನಾವಣೆಯಿಂದ ಹಿಡಿದು ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ವಂಚಿತರಾದ ಸತ್ಯಜಿತ್ ಸುರತ್ಕಲ್ ಅವರಿಗೆ ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಪಟ್ಟ ಒಲಿದು ಬರುವುದೇ ಎಂಬ ಚರ್ಚೆ ನಡೆಯುತ್ತಿದೆ .ಲೋಕಸಭಾ ಚುನಾವಣೆಯ ಫಲಿತಾಂಶ ನಾಳೆ ಹೊರಬರಲಿದ್ದು ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅವರು ಪುತ್ತೂರು ಶಾಸಕರ ಜವಾಬ್ದಾರಿ ಹೊಂದಿರುವುದರಿಂದ ಜೂನ್ ತಿಂಗಳಲ್ಲಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಹೇಳಲಾಗಿದೆ .ಈ ನಡುವೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿದ್ದು ,ಸತ್ಯಜಿತ್ ಸುರತ್ಕಲ್ ಅವರ ಹೆಸರು ಕೂಡ ಮುಂಚೂಣಿಯಲ್ಲಿದ್ದು ಈ ಬಾರಿ ಈ ಸ್ಥಾನಕ್ಕೆ ಯಾರೂ ಅಡ್ಡಗಾಲು ಹಾಕುವುದಿಲ್ಲ ಎಂಬ ವಿಶ್ವಾಸವನ್ನು ಸತ್ಯಜಿತ್ ಬೆಂಬಲಿಗರು ವ್ಯಕ್ತಪಡಿಸುತ್ತಿದ್ದಾರೆ .

0 comments: